ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸ್ವಾಯುತ ಸಂಸ್ಥೆಗಳಾದ ಇಡಿ, ಸಿಬಿಐ, ಐಟಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಪ್ರಗತಿಪರ ಸಂಘಟನೆಗಳು ದೆಹಲಿಯಲ್ಲಿ ಹೋರಾಟಕ್ಕೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ನವೆಂಬರ್ 7 ರಂದು ಹಿಂದುಳಿದ ವರ್ಗಗಳ ವೇದಿಕೆಯ ನೇತೃತ್ವದಲ್ಲಿ ದೆಹಲಿಯಲ್ಲಿಯೇ ಸಭೆ ಕರೆಯಲಾಗಿದೆ. ರಾಜ್ಯದ ಎಲ್. ಹನುಮಂತಯ್ಯ, ಎಸ್. ಜಿ. ಸಿದ್ದರಾಮಯ್ಯ, ಕಾಳೆಗೌಡ ನಾಗವಾರ ಅವರು ಸೇರಿದಂತೆ ಪ್ರಗತಿಪರ ಹೋರಾಟಗಾರರು ಸಭೆಯಲ್ಲಿ, ಪಾಲ್ಗೊಂಡು ಹೋರಾಟದ ರೂಪುರೇಷಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮುಡಾ ಹಗರಣ ತನಿಖೆಗೆ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರ ನಿರ್ಧಾರವೇ ಸಂವಿಧಾನ ಬಾಹಿರ ತೀರ್ಮಾನ. ಬಿಜೆಪಿಗರು ಅನೇಕ ರಾಜ್ಯಗಳಲ್ಲಿ ಇದೇ ರೀತಿ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ರಾಜ್ಯಕ್ಕೆ ಸೀಮಿತವಾಗಿದ್ದ ಮುಡಾ ಪ್ರೊಟೆಸ್ಟ್ ದೆಹಲಿಗೂ ವ್ಯಾಪಿಸಲಿದೆ.