ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮೂಲಗಳ ಪ್ರಕಾರ, ರಾಜನಾಥ್ ಸಿಂಗ್ ಅವರಿಗೆ ತೀವ್ರ ಬೆನ್ನು ನೋವಿದ್ದ ಹಿನ್ನೆಲೆ ಏಮ್ಸ್ ಗೆ ದಾಖಲಿಸಲಾಗಿದೆ. ಸದ್ಯ ಏಮ್ಸ್ ನ್ಯೂರೋ ಸರ್ಜರಿ ವಿಭಾಗದಲ್ಲಿ ಅವ್ರಿಗೆ ಚಿಕಿತ್ಸೆ ನೀಡಲಾಗ್ತಿದ್ದು, ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ.