ಸಾಮಾಜಿಕ ಮಾಧ್ಯಮದಿಂದ ವಿಚಾರಣೆಯ ವಿಡಿಯೋ ರೆಕಾರ್ಡಿಂಗ್ ಅನ್ನು ಕೂಡಲೇ ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ನಿಗೆ ಆದೇಶ ನೀಡಿದೆ. ಮದ್ಯ ನೀತಿ ಸಂಬಂಧಿತ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಯ ವಿಡಿಯೋ ರೆಕಾರ್ಡಿಂಗ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಪೋಸ್ಟ್ ಮಾಡಿದ್ದರು. ಇದೀಗ ಸೋಶಿಯಲ್ ಮೀಡಿಯಾ ವೇದಿಕೆಗಳಿಂದ ಅದನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.
ಮಾರ್ಚ್ 28 ರಂದು ದೆಹಲಿ ಹೈಕೋರ್ಟ್ನಲ್ಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆದಿದ್ದು, ಅದರ ವಿಡಿಯೋ ರೆಕಾರ್ಡಿಂಗ್ ಮಾಡಲಾಗಿದೆ ಎಂಬುದು ಗಮನಾರ್ಹ. ಈ ವಿಡಿಯೋ ರೆಕಾರ್ಡಿಂಗ್ ಅನ್ನು ಸುನಿತಾ ಕೇಜ್ರಿವಾಲ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದರು. ಇದೀಗ ಈ ವಿಡಿಯೋವನ್ನು ತೆಗೆದುಹಾಕುವಂತೆ ಸುನೀತಾ ಕೇಜ್ರಿವಾಲ್ಗೆ ಹೈಕೋರ್ಟ್ ಶನಿವಾರ ಆದೇಶ ನೀಡಿದೆ.