- ಕೇಜ್ರಿವಾಲ್ ಅವರ ಆಪ್ತ ಸಿಬ್ಬಂದಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ
- ಸಿಎಂ ನಿವಾಸದೊಳಗೆ ನನ್ನನ್ನು ಥಳಿಸಲಾಗಿದೆ ಎಂದು ಮಲಿವಾಲ್ ಆರೋಪಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಿಬ್ಬಂದಿ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಎಪಿಯ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ ಎಂದು ಸಿವಿನ್ ಲೈನ್ಸ್ ಪೊಲೀಸ್ ಠಾಣಾ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ಬಗ್ಗೆ ಔಪಚಾರಿಕ ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಎಂ ನಿವಾಸದೊಳಗೆ ನನ್ನನ್ನು ಥಳಿಸಲಾಗಿದೆ ಎಂದು ಮಲಿವಾಲ್ ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಭಿಬವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆಪ್ ಸಂಸದೆ ಆರೋಪಿಸಿದ್ದಾರೆ.