ರಾಜ್ಯಸಭಾ ಸಂಸದೆ ಸ್ವಾತಿ ಮಾಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಮೇ 13 ರಂದು ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಬಿಭವ್ ಕುಮಾರ್, ಮಾಲಿವಾಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿದೆ. ಪ್ರಕರಣ ಸಂಬಂಧ ದೆಹಲಿ ಪೊಲೀಸರು ಮೇ 18 ರಂದು ಬಿಭವ್ ಕುಮಾರ್ ಅವರನ್ನು ಬಂಧಿಸಿದ್ದರು.