ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣ ಕುರಿತು ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಿದ್ದು, ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಬಿ. ಆರ್ ಗವಾಯಿ ನೇತೃತ್ವದ ನ್ಯಾಯಾಪೀಠದಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು. ಲಡ್ಡು ವಿವಾದವನ್ನು ಮಾಧ್ಯಮದಲ್ಲಿ ಪ್ರಚಾರ ಮಾಡಿದ್ದು ಏಕೆ? ಜುಲೈನಲ್ಲಿ ವರದಿ ಬಂದರೂ ಕೂಡ ಸೆಪ್ಟೆಂಬರ್ ನಲ್ಲಿ ಬಹಿರಂಗವಾಗಿದೆ. ಇದರ ಉದ್ದೇಶವೇನು? ದೇವರನ್ನು ರಾಜಕೀಯದಿಂದ ದೂರವಿಡಿ. ಇಂತಹ ಪ್ರಚಾರದಿಂದ ಭಕ್ತರ ನಂಬಿಕೆಗೆ ಧಕ್ಕೆ ಆಗುವುದಿಲ್ಲವೇ? ತನಿಖೆ ಪೂರ್ಣ ಆಗೋವವರೆಗೂ ಮಾಧ್ಯಮದಲ್ಲಿ ಪ್ರಚಾರ ಏಕೆ ಮಾಡಿದ್ದೀರಿ? ಇನ್ನಾದರೂ ಬಹಿರಂಗ ಹೇಳಿಕೆ ನೀಡುವುದನ್ನು ತಡೆಯಿರಿ ಎಂದು ರಾಜ್ಯ ಸರ್ಕಾರದ ಪರವಕೀಲರಿಗೆ ಸುಪ್ರೀಂಕೋರ್ಟ್ ತಿಳಿಸಿ ಅಕ್ಟೋಬರ್ 3ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಸುಬ್ರಮಣ್ಯಂ ಸ್ವಾಮಿಯ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜಶೇಖರ್ ರಾವ್ ಅವರು, ತಾವು ಇಲ್ಲಿ ಭಕ್ತನಾಗಿ ಬಂದಿದ್ದೇನೆ ಮತ್ತು ಪ್ರಸಾದದಲ್ಲಿನ ಮಾಲಿನ್ಯದ ಬಗ್ಗೆ ಪತ್ರಿಕೆಗಳಲ್ಲಿ ನೀಡಿರುವ ಹೇಳಿಕೆಯು ದೂರಗಾಮಿ ಪರಿಣಾಮಗಳನ್ನು ಹೊಂದಿದೆ ಮತ್ತು ಇತರ ಹಲವು ಸಮಸ್ಯೆಗಳನ್ನು ಹುಟ್ಟುಹಾಕಬಹುದು ಮತ್ತು ಕೋಮು ಸೌಹಾರ್ದತೆಗೆ ಭಂಗ ತರಬಹುದು ಎಂದು ಹೇಳಿದರು. ಇವು ಕಾಳಜಿಯ ವಿಷಯಗಳಾಗಿವೆ. ದೇವರ ಪ್ರಸಾದದ ಮೇಲೆ ಪ್ರಶ್ನಾರ್ಥಕ ಚಿಹ್ನೆ ಇದ್ದರೆ ಅದನ್ನು ಪರಿಶೀಲಿಸಬೇಕು ಎಂದು ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದಕ್ಕೆ ಸಂಬಂದಿಸಿದಂತೆ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ಯಂತ ಅರ್ಜಿಗಳನ್ನು ಇಂದು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತು ರಾಜ್ಯ ಸಭಾ ಸಂಸದ ತಿರುಮಲ ತಿರುಪತಿ ದೇವಸ್ಥಾನದ ಮಾಜಿ ಅಧ್ಯಕ್ಷ ವೈ ವಿ ಸುಬ್ಬಾ ರೆಡ್ಡಿ ಅವರು ಸಲ್ಲಿಸಿದ್ಯಂತ ಅರ್ಜಿಗಳ ವಿಚಾರಣೆಯನ್ನು ನಡೆಸಿದೆ.
ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವದ ಹಿಂದಿನ ವೈಎಸ್ ಆರ್ ಕಾಂಗ್ರೆಸ್ ಸರ್ಕಾರದಲ್ಲಿ ತಿರುಪತಿ ದೇವಸ್ಥಾನದಿಂದ ಲಡ್ಡುಗಳನ್ನು ಪ್ರಸಾದವಾಗಿ ನೀಡಿದ್ದಾಗ ಅದರಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು ಇಂತಹ ಲಡ್ಡು ವಿವಾದದ ಬಗ್ಗೆ ಸಲ್ಲಿಸಿದ್ದಂತ ಅರ್ಜಿಗಳನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.