ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ಅತಿ ದೊಡ್ಡ ಮಾದಕ ದ್ರವ್ಯ ದಂಧೆಯಲ್ಲಿ 2,000 ಕೋಟಿ ರೂ. ಮೌಲ್ಯದ 560 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರ ಪ್ರಕಾರ, ಈ ಬೃಹತ್ ಕೊಕೇನ್ ರವಾನೆಯ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್ ಸ್ಮಗ್ಲಿಂಗ್ ಸಿಂಡಿಕೇಟ್ ಕೈವಾಡವಿದೆ. ಇದು ದಕ್ಷಿಣ ದೆಹಲಿಯಿಂದ ನಡೆಸಲ್ಪಡುತ್ತಿದ್ದ ಅಂತಾರಾಷ್ಟ್ರೀಯ ಡ್ರಗ್ ಸಿಂಡಿಕೇಟ್ ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ದೆಹಲಿ ಪೊಲೀಸರು ಇಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದ ಅತಿದೊಡ್ಡ ಮಾದಕ ದ್ರವ್ಯ ದಂಧೆಯಲ್ಲಿ ಸುಮಾರು 2,000 ಕೋಟಿ ರೂ. ಮೌಲ್ಯದ 560 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ. ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿ ಡ್ರಗ್ಸ್ ಪತ್ತೆಯಾಗಿದ್ದು, ಈ ಪ್ರಕರಣದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಇದು ಅಂತಾರಾಷ್ಟ್ರೀಯ ಡ್ರಗ್ ಸಿಂಡಿಕೇಟ್ ಆಗಿದ್ದು, ಅಫ್ಘಾನ್ ಪ್ರಜೆಗಳು ನವದೆಹಲಿಯಲ್ಲಿ ಇದನ್ನು ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರು ದೆಹಲಿಯಲ್ಲಿ ಕೊಕೇನ್ ಮಾರಾಟ ಮಾಡಲು ಯೋಜಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಶೇಷ ಕೋಶದ ತಂಡವು ಸುಳಿವನ್ನು ಆಧರಿಸಿ 2 ತಿಂಗಳಿನಿಂದ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು. ಸಿಂಡಿಕೇಟ್ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರು ಅಫ್ಘಾನಿಸ್ತಾನದ ಪ್ರಜೆಗಳನ್ನು ಬಂಧಿಸಿದ ಕೆಲವೇ ದಿನಗಳಲ್ಲಿ ಡ್ರಗ್ ದಂಧೆ ಬೆಳಕಿಗೆ ಬಂದಿದೆ. ತಿಲಕ್ ನಗರದಲ್ಲಿ ನಡೆದ ದಾಳಿ ವೇಳೆ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಇಬ್ಬರು ಆರೋಪಿಗಳಾದ ಹಾಶಿಮಿ ಮೊಹಮ್ಮದ್ ವಾರಿಸ್ ಮತ್ತು ಅಬ್ದುಲ್ ನಯೀಬ್ ಅವರಿಂದ 400 ಗ್ರಾಂ ಹೆರಾಯಿನ್ ಮತ್ತು 160 ಗ್ರಾಂ ಕೊಕೇನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಾರಿಸ್ ಅವರು ಜನವರಿ 2020ರಿಂದ ಭಾರತದಲ್ಲಿ ವಾಸಿಸುತ್ತಿದ್ದಾರೆ. ಅವರ ಕುಟುಂಬವು ಅಫ್ಘಾನಿಸ್ತಾನದಲ್ಲಿದೆ. ಪೊಲೀಸರ ಪ್ರಕಾರ ನಯೀಬ್ ಕೂಡ ಆಫ್ಘನ್ ಪ್ರಜೆಯಾಗಿದ್ದು, ಅವನು ತನ್ನ ತಂದೆಯೊಂದಿಗೆ ಜನವರಿ 2020ರಲ್ಲಿ ಭಾರತಕ್ಕೆ ಬಂದನು. ಅವರು ನೋಂದಾಯಿತ ನಿರಾಶ್ರಿತರಾಗಿದ್ದರು. ಅವರ ತಂದೆಯನ್ನು ಹೊರತುಪಡಿಸಿ ಅವರ ಇಡೀ ಕುಟುಂಬವು ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದೆ.