ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭಾ ಚುನಾವಣೆಯ ಮತಎಣಿಕೆ ಅಂತ್ಯವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರ ಈ ಬಾರಿಯೂ ಬಿಜೆಪಿಯ ತೆಕ್ಕೆಗೆ ಬಿದ್ದಿದೆ. ಐದನೇ ಬಾರಿಯೂ ಗೆಲ್ಲುವ ಮೂಲಕ ಪ್ರಲ್ಹಾದ್ ಜೋಶಿ ಇತಿಹಾಸ ಸೃಷ್ಟಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರಲ್ಹಾದ್ ಜೋಶಿ ಐದನೇ ಬಾರಿಗೆ ಕಣಕ್ಕೆ ಇಳಿದಿದ್ದರು. ಇನ್ನು ಕಾಂಗ್ರೆಸ್ ಹೊಸ ಮುಖಕ್ಕೆ ಮಣೆ ಹಾಕಿದ್ದು ವಿನೋದ ಅಸೂಟಿ ಅವರನ್ನು ಕಣಕ್ಕಿಳಿತ್ತು. ಸಂಸದ ಪ್ರಲ್ಹಾದ್ ಜೋಶಿಯವರು ವಿನೋದ್ ಅಸೂಟಿ ಅವರನ್ನು ಸೋಲಿಸಿದ್ದಾರೆ.