ಧಾರವಾಡ: ಕೆಪಿಎಸ್ಸಿಯಿಂದ ಈಗ ಮತ್ತೊಂದು ಮಹಾ ಎಡವಟ್ಟು ಆಗಿದೆ ಎನ್ನಲಾಗಿದೆ. ಡಿಸೆಂಬರ್ 8 ರಂದು ನಡೆದ ಪಿಡಿಒ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಇದೀಗ ಕೇಳಿ ಬರುತ್ತಿದೆ. ಧಾರವಾಡದಲ್ಲಿ ಪ್ರಶ್ನೆ ಪತ್ರಿಕೆಗಳ ಮೇಲಿನ ಸೀಲ್ ಓಪನ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್ ಆಗಿರುಚ ಫೋಟೋ ಇದೀಗ ವೈರಲ್ ಆಗಿದೆ.
ಕಳೆದ ಡಿಸೆಂಬರ್ 8 ರಂದು ನಡೆದಿದ್ದ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ. ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಮಾಡಿರುವ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಪ್ಪಿತಸ್ಥರನ್ನು ಶಿಕ್ಷಸಿ ಮರುಪರೀಕ್ಷೆಗೆ ಆದೇಶ ನೀಡಬೇಕೆಂಬ ಆಗ್ರಹವು ವ್ಯಕ್ತವಾಗಿದೆ.
ಪಿಡಿಒ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾನ್ಯವಾಗಿ ಮೂರು ಹಂತದ ಸೀಲ್ ಭದ್ರತೆ ಹೊಂದಿರುತ್ತದೆ. ಪರೀಕ್ಷಾ ಕೇಂದ್ರದ ಪ್ರಶ್ನೆ ಪತ್ರಿಕೆಗಳ ಬಂಡಲ್ಗೆ ಸಮಗ್ರವಾಗಿ ಪ್ಲಾಸ್ಟಿಕ್ ಕವರ್ನ ಸೀಲ್ ಹಾಕಿರಲಾಗುತ್ತದೆ. ಬಳಿಕ ಆಯಾ ಪರೀಕ್ಷಾ ಕೊಠಡಿಯ ಪ್ರಶ್ನೆ ಪತ್ರಿಕೆಗಳಿಗೆ ಕಾಗದದ ಕವರ್ನ ಜೊತೆಗೆ ಸೀಲ್ ಹಾಕಿರುತ್ತಾರೆ. ಕೊನೆಗೆ ಪ್ರತಿಯೊಂದು ಪ್ರಶ್ನೆ ಪತ್ರಿಕೆಗೂ ಪ್ರತ್ಯೇಕ ಸೀಲ್ ಇರುತ್ತದೆ. ಆದರೆ ಪ್ರಶ್ನೆ ಪತ್ರಿಕೆಯ ಮೇಲಿನ ಸೀಲ್ ಓಪನ್ ಮಾಡಿ ಪುನಃ ಆಂಟಿಸಿದ್ದಾರೆಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.