ದೇಶದೆಲ್ಲೆಡೆ ಇಂದು ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯ ಮೇಲೆ ಪ್ರಧಾನಿ ಮೋದಿ 11ನೇ ಬಾರಿ ಧ್ವಜಾರೋಹಣ ಮಾಡಿದರೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದರು. ವಿಶೇಷವಾಗಿ ಕಂಡಿದ್ದು ಡಿಸಿಎಂ ಡಿಕೆ ಶಿವಕುಮಾರ್ ಚನ್ನಪಟ್ಟಣದಲ್ಲಿ ನೆರವೇರಿಸಿದ ಧ್ವಜಾರೋಹಣ.
ಸ್ವಾತಂತ್ರ್ಯ ದಿನಾಚರಣೆಯಂದೇ ಚನ್ನಪಟ್ಟಣದ ರಾಜಕಾರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಕಳೆದೊಂದು ತಿಂಗಳಿನಿಂದ ಚನ್ನಪಟ್ಟಣದಲ್ಲಿ ಸುತ್ತಾಡುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಇಂದು ಚನ್ನಪಟ್ಟಣದಲ್ಲಿ ಧ್ವಜಾರೋಹಣ ಮಾಡಿದ್ದಾರೆ. ಡಿಕೆ ಜೊತೆ ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಅಕ್ಕ ಪಕ್ಕ ಕೂತು ಕುತೂಹಲ ಹೆಚ್ಚಿಸಿದ್ದಾರೆ.
ಉಪಚುನಾವಣೆ ಘೋಷಣೆಗೂ ಮುನ್ನವೇ ಚನ್ನಪಟ್ಟಣ ಅಖಾಡ ಈಗಾಗಲೇ ರಂಗೇರಿದೆ. ಒಂದೆಡೆ ಮೈತ್ರಿಗಳಾಗಿರುವ ಬಿಜೆಪಿ ಜೆಡಿಎಸ್ ಮಧ್ಯೆ ಟಿಕೆಟ್ ಫೈಟ್ ನಡೆಯುತ್ತಿದೆ. ಸಿ.ಪಿ ಯೋಗೇಶ್ವರ್ ತಮಗೆ ಟಿಕೆಟ್ ಬೇಕೆಂದು ಪಟ್ಟು ಹಿಡಿದ್ದಾರೆ. ಈ ಮಧ್ಯೆ ಇಂದು ಚನ್ನಪಟ್ಟಣದಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ, ಸಿ.ಪಿ ಯೋಗೇಶ್ವರ್ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ವೇದಿಕೆ ಹಂಚಿಕೊಳ್ಳುವ ಮೂಲಕ ಕುತೂಹಲಕ್ಕೆ ಕಾರಣವಾಗಿದ್ದಾರೆ. ನಾನು ರಾಜಕಾರಣ ಮಾಡೋಕೆ ಬಂದಿಲ್ಲ ಎನ್ನುತ್ತಲೇ ದಾಳ ಉರುಳಿಸಿದ್ದಾರೆ.