ಚನ್ನಪಟ್ಟಣದಲ್ಲಿ ಆಪರೇಷನ್ ಸಕ್ಸಸ್ ಆಗಿದ್ದು ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದರು. ಮಧ್ಯರಾತ್ರಿ ಖಾಸಗಿ ಹೊಟೇಲ್ನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಭೇಟಿ ವೇಳೆ ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದರು. ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿ ಜೊತೆಯಾಗಿ ಸಿಎಂ ನಿವಾಸಕ್ಕೆ ಆಗಮಿಸಿದ್ದರು.
ಇದನ್ನೂ ಓದಿ: ಸಿಎಂ ಆಶೀರ್ವಾದ ಪಡೆದ ಯೋಗೇಶ್ವರ್; ಇಂದೇ ಕಾಂಗ್ರೆಸ್ ಸೇರ್ಪಡೆ..!
ಈ ಹಿಂದೆ ಜೆಡಿಎಸ್ನಿಂದ ಸ್ಪರ್ಧಿಸುತ್ತೀರಾ ಎಂಬ ಪ್ರಶ್ನೆಗೆ, ಈಗಾಗಲೇ ನನ್ನನ್ನು ಪಕ್ಷಾಂತರಿ ಎಂದು ಕರೆಯುತ್ತಿದ್ದಾರೆ. ಮತ್ತೆ ನಾನು ಬೇರೆ ಪಕ್ಷದ ಚಿಹ್ನೆಯ ಅಡಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಯೋಗೇಶ್ವರ್ ನಿರ್ಣಯ ಏನಿರಬಹುದು ಎಂಬ ಕುತೂಹಲ ಹೆಚ್ಚಾಗಿತ್ತು.