“ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಇಂದು ಪ್ರತಿಕ್ರಿಯೆ ನೀಡಿದರು.
ನೀವು ಸಿಎಂ ಆಗಲಿ ಎಂದು ಸ್ವಾಮೀಜಿಗಳು ಆಶೀರ್ವಾದ ಮಾಡಿದ್ದಾರೆ ಎಂದು ಕೇಳಿದ ಪ್ರಶ್ನೆಗೆ “ಧರ್ಮಗುರುಗಳು ಆಶೀರ್ವಾದ ಮಾಡುವಾಗ ನಾವು ಏನು ಹೇಳಲು ಸಾಧ್ಯ? ಅದು ಅವರ ಇಚ್ಛೆ. ಏನೇ ಇದ್ದರೂ ನಮ್ಮ ಪಕ್ಷವಷ್ಟೇ. ಪಕ್ಷ ಮುಖ್ಯ. ಪಕ್ಷ ಏನು ತೀರ್ಮಾನ ಮಾಡುತ್ತದೋ, ಅದನ್ನು ನಾವು ಮಾಡುತ್ತೇವೆ. ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ. ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಏನು ಕೆಲಸ ಮಾಡಬೇಕೋ ಅದನ್ನು ನಾನು ಮಾಡುತ್ತೇನೆ. ನಾನು ಆತುರದಲ್ಲಿಲ್ಲ” ಎಂದು ತಿಳಿಸಿದರು.
ಎಸ್.ಟಿ ಸೋಮಶೇಖರ್ ಅವರು ನಿಮ್ಮ ಸಮಾವೇಶದಲ್ಲಿ ಭಾಗವಹಿಸಿದ್ದರು ಎಂದು ಕೇಳಿದಾಗ, “ಅವರು ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು” ಎಂದರು.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ:
https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ:
https://chat.whatsapp.com/HWayJDSBf9aI06q6jplPgc