ಸಿಎಂ ಸಿದ್ದರಾಮಯ್ಯನವರ ಪತ್ನಿಗೆ ಅಕ್ರಮವಾಗಿ 14 ಮುಡಾ ಬದಲಿ ನಿವೇಶನಗಳನ್ನು ನೀಡಲಾಗಿದೆ ಎಂದು ಬಿಜೆಪಿ, ಜೆಡಿಎಸ್ ಆರೋಪಿಸಿದ್ದು, ಪ್ರತಿಭಟನೆ ನಡೆಸುತ್ತಿವೆ. ಈಗ ಬೆಂಗಳೂರಿನಿಂದ ಮೈಸೂರುವರೆಗೆ ಬೃಹತ್ ಪಾದಯಾತ್ರೆಗೆ ಪ್ಲ್ಯಾನ್ ಮಾಡಿದ್ದಾರೆ. ಆದರೆ, ಇದಕ್ಕೆ ಅನುಮತಿ ನೀಡುವುದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ಪಾದಯಾತ್ರೆಗೆ ನಾವು ಅವಕಾಶ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ.