ಬೆಳಗಾವಿಯಲ್ಲಿ ಇತ್ತೀಚಿಗೆ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿವೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಬೆಳಗಾವಿಯ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಶಾಲಾ ಮೈದಾನದಲ್ಲಿ ಘಟನೆ ನಡೆದಿದೆ.
23 ವರ್ಷದ ರವಿ ತಿಮ್ಮನ್ನವರ್ ಕೊಲೆಯಾದ ದುರ್ದೈವಿಯಾಗಿದ್ದಾನೆ. ಕುಡಗೋಲು, ಬೀರ್ ಬಾಟಲಿಯಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. 13ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ನಡೆದ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದನು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.