ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ ಉಪಚುನಾವಣೆಯ ಕಾವು. 3 ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಗೆ ರಾಜ್ಯದ 3 ಪಕ್ಷಗಳು ರಣತಂತ್ರಗಳನ್ನ ರೂಪಿಸುತ್ತಿವೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದ ತೆರುವಾಗಿದ್ದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ತಮ್ಮ ಮಗನಾದ ಭರತ್ ಬೊಮ್ಮಾಯಿ ಅವರನ್ನು ಕಣಕ್ಕಿಳಿಸಲು ಸಂಸದ ಬಸವರಾಜ್ ಬೊಮ್ಮಾಯಿ ಇಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ್ದಾರೆ.
ಶಿಗ್ಗಾಂವಿ ಉಪ ಚುನಾವಣೆ ಬಗ್ಗೆ ಯಡಿಯೂರಪ್ಪ ಅವರ ಜೊತೆಗೆ ಚರ್ಚಿಸಿದ್ದಾರೆ ಬೊಮ್ಮಾಯಿ. ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿರೋ ಬಿಎಸ್ವೈ ಗೆ ಈಗಾಗಲೇ ಪುತ್ರ ಭರತ ಬೊಮ್ಮಾಯಿಗೆ ಟಿಕೆಟ್ ಬೇಡಿಕೆ ಇಟ್ಟಿದ್ದಾರೆ. ಭರತ ಬೊಮ್ಮಾಯಿಗೆ ಟಿಕೆಟ್ ಗಿಟ್ಟಿಸಿಕೊಂಡು ಕ್ಷೇತ್ರದಲ್ಲಿ ಹಿಡಿತ ಸಾಧಿಸುವ ತಂತ್ರಕ್ಕೆ ಮುಂದಾಗಿದ್ದಾರೆ ಬಸವರಾಜ್ ಬೊಮ್ಮಾಯಿ. ಬಸವರಾಜ ಬೊಮ್ಮಾಯಿ ಜೊತೆಗೆ ರೇಣುಕಾಚಾರ್ಯ ಕೂಡ ಇಂದು ಬಿಎಸ್ವೈ ಮನೆಯಲ್ಲಿ ಕಾಣಿಸಿಕೊಂಡಿದ್ದಾರೆ.