ದೆಹಲಿ ಅಬಕಾರಿ ನೀತಿಯ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಲಾಗಿದೆ. ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶವನ್ನು ಕಾಯ್ದಿರಿಸಿದೆ.
ಅಬಕಾರಿ ನೀತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಲಾಗಿತ್ತು. ಮಧ್ಯಂತರ ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗೆ ಇಡಿ ಆಕ್ಷೇಪ ವ್ಯಕ್ತಪಡಿಸಿತ್ತು. ಅರ್ಜಿ ವಿಚಾರಣೆಗೆ ನಡೆಸಿದ ವಿಚಾರಣೆಗೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಹೀಗಾಗಿ ಅವರಿಗೆ ಇಂದು ಜಾಮೀನು ಸಿಗುವುದಿಲ್ಲ. ಒಂದು ವೇಳೆ ಜಾಮೀನು ಸಿಕ್ಕರೂ ಕೂಡ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವುದಿಲ್ಲ ಎಂದು ಹೇಳಲಾಗಿದೆ.