ಮೀನಿನ ವಾರ್ಷಿಕ ರಫ್ತು ವಹಿವಾಟನ್ನು ಈಗಿನ 60,000 ಕೋಟಿ ರೂಪಾಯಿಯಿಂದ ಮುಂದಿನ ವರ್ಷ 1 ಲಕ್ಷ ಕೋಟಿ ರುಪಾಯಿಗೆ ಏರಿಸಲು ಕೇಂದ್ರ ಸರ್ಕಾರ ಗುರಿ ಇರಿಸಿಕೊಂಡಿದೆ ಎಂದು ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಬುಧವಾರ ಹೇಳಿದ್ದಾರೆ.
ಮುಂದಿನ 5 ವರ್ಷಗಳಲ್ಲಿ ಮೀನುಗಾರಿಕೆ ವಲಯವನ್ನು ಬಲಪಡಿಸಲು ಅನೇಕ ಮಾಹಿತಿ ಕ್ರಮಗಳನ್ನೂ ಸರ್ಕಾರ ಕೈಗೊಳ್ಳಲಿದೆ ಎಂದು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ 4ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಸಿಂಗ್ ಹೇಳಿದರು. ಇದೇ ವೇಳೆ ಸಚಿವರು ಪ್ರಧಾನ ಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಸಹ- ಯೋಜನೆಗೆ ಚಾಲನೆ ನೀಡಿದರು. ಮೀನುಗಾರಿಕೆ ಕ್ಷೇತ್ರದ ಉತ್ಪಾದನೆ ಹಾಗೂ ಸಂಸ್ಕರಣೆ ಕ್ಲಸ್ಟರ್ಗಳ ಮಾರ್ಗಸೂಚಿ ಬಿಡುಗಡೆ ಮಾಡಿದರು.