ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದೆ. ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳು ತತ್ತರಿಸಿವೆ. ಅದರಂತಯೇ ಕರ್ನಾಟಕದಲ್ಲೂ ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ. ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಸಂಜೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆದರೆ ಮಂಗಳವಾರ ಸಾಧಾರಣ ಮಳೆಯಾಗಬಹುದು. ಈ ಪ್ರದೇಶಗಳಲ್ಲಿ ಬುಧವಾರದಿಂದ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು, ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.