ಕರ್ನಾಟಕಾದ್ಯಂತ ಚಳಿಗಾಲದ ಇದ್ದರೂ ಕೂಡ ಹಲವು ಕಡೆ ಮಳೆಯ ಅಬ್ಬರ ಜೋರಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಎಚ್ಚರಿಕೆ ನೀಡಿದೆ. ರಾಜಧಾನಿಯಲ್ಲಿ ಇಂದು ಮೋಡ ಕವಿ ವಾತಾವರಣ ಇರುವ ಸಾಧ್ಯತೆ ಇದೆ ಮತ್ತು ನಗರದ ಹಲವೆಡೆ ಸಾಧಾರಣ ಮಳೆಯಾಗುವ ಸಂಭವ ಇದೆ. ಹಾಗಾಗಿ ಬೆಂಗಳೂರಿಗರು ಮನೆಯಿಂದ ಹೊರ ಬರೋ ಮುನ್ನ ಎಚ್ಚರ ವಹಿಸತಕ್ಕದ್ದು.
ಎಲ್ಲೆಲ್ಲಿ ಮಳೆ ಬೀಳುವ ಸಾಧ್ಯತೆ ಇದೆ?
ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ವ್ಯಾಪಕ ಮಳೆ ಬೀಳಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು, ವಿಜಯಪುರ , ಶಿವಮೊಗ್ಗ, ದಕ್ಷಿಣ ಕನ್ನಡ, ಕರಾವಳಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಈ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಬೀಳಲಿದೆ.