ರಾಷ್ಟ್ರ ರಾಜಧಾನಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಮೆಟ್ರೋದಲ್ಲಿ ನಿರ್ಮಲಾ ಸೀತಾರಾಮನ್ ಜೊತೆ ಭದ್ರತಾ ಸಿಬ್ಬಂದಿಗಳು ಹಾಗೂ ಇತರ ಪ್ರಯಾಣಿಕರ ಪ್ರಯಾಣಿಸುತ್ತಿದ್ದರು. ಈ ವೇಳೆ ಮಹಿಳೆಯೊಬ್ಬಳು ನಿರ್ಮಲಾ ಸೀತಾರಾಮನ್ ಅವರ ಭುಜವನ್ನು ತಟ್ಟುತ್ತಾಳೆ. ಆದರೆ ಸೀತಾರಾಮನ್ ಪ್ರತಿಕ್ರಿಯೆಯಾಗಿ ನಗುತ್ತಾರೆ. ಈ ವಿಡಿಯೋ ವೈರಲ್ ಆಗಿದ್ದು, 461k ವೀಕ್ಷಣೆಯನ್ನು ಪಡೆದುಕೊಂಡಿದೆ.