ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. 6 ಮಂದಿ ಸಾವನ್ನಪ್ಪಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ. ಗಂಭೀರವಾಗಿ ಗಾಯಗೊಂಡ ಕೆಲವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಕಿಯಿಂದಾಗಿ ಹೋಟೆಲ್ನಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಹೋಗಿವೆ.
ಘಟನಾ ಸ್ಥಳಕ್ಕೆ ದೌಡಾಯಿಸಿದ ಗೃಹ ರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ಡಿಜಿ ಶೋಭಾ ಒಹತ್ಕರ್ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಬೆಂಕಿಯನ್ನು ಹತೋಟಿಗೆ ತಂದಿದ್ದೇವೆ. ತನಿಖೆಯ ಮೂಲಕ ನಿಖರವಾದ ಕಾರಣವನ್ನು ಕಂಡುಹಿಡಿಯಲಾಗುವುದು ಮತ್ತು ಸೂಕ್ತ ಕ್ರಮವನ್ನು ಅನುಸರಿಸಲಾಗುವುದು ಎಂದು ಹೇಳಿದ್ದಾರೆ.