ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಎದುರು ಇತ್ತೀಚೆಗಷ್ಟೇ ಗುಂಡಿನ ದಾಳಿ ನಡೆಸಿದ್ದ ಪ್ರಕರಣದಲ್ಲಿ ಐದನೇ ಆರೋಪಿಯನ್ನು ಕ್ರೈಂ ಬ್ರ್ಯಾಂಚ್ ಐದನೇ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ರಾಜಸ್ಥಾನದ ಮೊಹಮ್ಮದ್ ಚೌಧರಿಯನ್ನು ಬಂಧಿಸಲಾಗಿದೆ. ಈತ ಇಬ್ಬರು ಶೂಟರ್ಗಳಾದ ಸಾಗರ್ ಪಾಲ್ ಮತ್ತು ವಿಕ್ಕಿ ಗುಪ್ತಾ ಅವರಿಗೆ ಹಣ ನೀಡಿದ್ದ. ಅಲ್ಲದೇ ಅವರು ಸ್ಥಳದಿಂದ ಪರಾರಿಯಾಗಲು ನೆರವಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊಹಮ್ಮದ್ ಚೌಧರಿಯನ್ನು ಇಂದು ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು. ವಿಚಾರಣೆಗಾಗಿ ಆತನನ್ನು ವಶಕ್ಕೆ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಮುಂಬೈ ಕ್ರೈಂ ಬ್ರ್ಯಾಂಚ್ ತಿಳಿಸಿದೆ.