ಗದಗ: ಸೂರ್ಯಚಂದ್ರ ಇರುವವರೆಗೂ ಲಂಬಾಣಿ ಸಮುದಾಯ ಎಸ್ಸಿ ಮೀಸಲು ಪ್ರವರ್ಗದಲ್ಲಿ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬರದಕಟ್ಟಿ ಗ್ರಾಮದಲ್ಲಿ ಲಂಬಾಣಿ ಸಮುದಾಯದ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲಂಬಾಣಿ ಸಮುದಾಯ ಸುಸಂಸ್ಕೃತ ಸಮುದಾಯ. ಈ ಸಮುದಾಯ ತಾಂಡಾಗಳಲ್ಲಿ ಇರುವುದರಿಂದ ಅವಕಾಶಗಳು ಸಿಗುತ್ತಿಲ್ಲ. ಈ ಸಮುದಾಯದ ಮಕ್ಕಳು ಬಹಳ ಬುದ್ದಿವಂತರಿದ್ದಾರೆ. ಕಾಶ್ಮಿರದಿಂದ ಕನ್ಯಾಕುಮಾರಿವರೆಗೂ ಇರುವ ಕೆಲವೇ ಸಮುದಾಯಗಳಲ್ಲಿ ಬಂಜಾರ ಸಮುದಾಯವೂ ಒಂದು. ಈ ಸಮುದಾಯ ತನ್ನ ಸಂಸ್ಕೃತಿಯನ್ನು ಉಳಿಸಿಕೊಂಡು ಬಂದಿದೆ. ಈ ಸಮುದಾಯದ ತಾಯಂದಿರಿಗೆ ಅಭಿನಂದನೆಗಳು ಎಂದು ಹೇಳಿದರು.