ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರೋ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ʻಅಹಿಂದʼ ಸಂಘಟನೆಗ ರೋಷಾಗ್ನಿ ಕಾರುತ್ತಿವೆ. ರಾಜ್ಯದ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಗೌರ್ನರ್ ವಿರುದ್ಧ ಆಕೋಶ ಭುಗಿಲೆದ್ದಿದ್ದು ಪ್ರತಿಭಟನೆಗಳು ನಡೆಸುತ್ತಿವೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ನಾಕಾದಲ್ಲಿ ಕುರಬ ಸಂಘ, ಅಹಿಂದ ಸಂಘಟನೆ, ಕಾಂಗ್ರೆಸ್ ಕಾರ್ಯಕರ್ತರು ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ಗೌರ್ನರ್ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದಾರೆ.
ರಾಜ್ಯಪಾಲ ಗೆಹ್ಲೋಟ್ ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ, ಬಿಜೆಪಿ, ಜೆಡಿಎಸ್ನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆದಿದೆ ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೆ ರಾಜ್ಯದ ಜನತೆ ಇದ್ದಾರೆ, ಅಹಿಂದ ಸಂಘಟನೆಗಳು ಸಿಎಂ ಬೆನ್ನಿಗಿದ್ದೇವೆ, ಇನ್ನೈದು ವರ್ಷ ಸಿದ್ದರಾಮಯ್ಯ ಅವರೆ ಮುಖ್ಯಮಂತ್ರಿ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.