ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ಪರ ಕುರುಬ ಸಮಾಜದಿಂದ ಪ್ರತಿಭಟನೆ ನಡೆಸಿದರು. ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಖಂಡಿಸಿ ಗದಗ ನಗರದ ಟಿಪ್ಪು ಸುಲ್ತಾನ್ ಸರ್ಕಲ್ನಿಂದ ಡಿಸಿ ಕಚೇರಿಯವರಿಗೆ ಪ್ರತಿಭಟನಾ ಮೆರವಣಿಗೆ ಮಾಡಲಾಯಿತು.
ಕರ್ನಾಟಕ ಪ್ರದೇಶ ಕುರುಬರ ಸಂಘ ಗದಗ ಜಿಲ್ಲಾ ಘಟಕದಿಂದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ವಿರುದ್ಧ ಕಪ್ಪು ಬಟ್ಟೆ ಧರಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ವಿರುದ್ಧ ವಿರೋಧ ಪಕ್ಷಗಳು ಹುನ್ನಾರ ನಡೆಸಿವೆ. ಶುದ್ಧ ಆಡಳಿತ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಿನಾಕಾರಣ ಆರೋಪ ಮಾಡ್ತಾಯಿದ್ದಾರೆ ಎಂದು ಕಿಡಿಕಾರಿದರು.