ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಶುಕ್ರವಾರದಿಂದಲೂ ಬೆಲೆ ಹಾದಿಯಇಳಿಮುಖ ಲ್ಲಿದೆ. ನಿನ್ನೆ ಮತ್ತು ಮೊನ್ನೆ ಗ್ರಾಮ್ಗೆ 10 ರುಪಾಯಿಯಷ್ಟು ಇಳಿದಿದ್ದ ಚಿನ್ನದ ಬೆಲೆ ಇಂದು ಬರೋಬ್ಬರಿ 25 ರುಪಾಯಿಯಷ್ಟು ಕಡಿಮೆ ಆಗಿದೆ. ಅಪರಂಜಿ ಚಿನ್ನ 27 ರುಪಾಯಿಯಷ್ಟು ಅಗ್ಗವಾಗಿದೆ. ಭಾರತದಲ್ಲಿ ಹೆಚ್ಚಿನ ಇಳಿಕೆ ಆಗಿದೆ. ವಿದೇಶಗಳಲ್ಲಿ ಬಹುತೇಕ ಯಥಾಸ್ಥಿತಿ ಇದೆ.
ಬೆಳ್ಳಿ ಬೆಲೆ ಇಂದು ಸೋಮವಾರ ಗ್ರಾಮ್ಗೆ ಒಂದು ರುಪಾಯಿಯಷ್ಟು ಕಡಿಮೆ ಆಗಿದೆ. 87 ರೂ ಇದ್ದದ್ದು 86 ರೂಗೆ ಇಳಿದಿದೆ. ಬೆಂಗಳೂರಿನಲ್ಲಿ 85 ರೂ ದರವೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,770 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,500 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,770 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ