ವಿದೇಶದ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಬಹುತೇಕ ಯಥಾಸ್ಥಿತಿಯಲ್ಲಿ ಇದ್ದರೂ ಭಾರತದಲ್ಲಿ ಹೆಚ್ಚಳ ಆಗಿದೆ. ಇಂದು ಗಾಂಧಿ ಜಯಂತಿ ದಿನದಂದು ಚಿನ್ನದ ಬೆಲೆ ಗ್ರಾಮ್ಗೆ 50 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿ ಮುಂದುವರಿದಿದೆ. ಅಂತಾರಾಷ್ಟ್ರೀಯವಾಗಿ ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಕೆಲವೆಡೆ ತುಸು ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 71,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 77,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 71,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,000 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 71,000 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 77,450 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ