ರಾಜ್ಯದಲ್ಲಿ ಆಹಾರ ಇಲಾಖೆಯು ಆಹಾರ ಗುಣಮಟ್ಟದ ವಿಚಾರದಲ್ಲಿ ಕಠಿಣ ನಿಲುವು ತಾಳಿದ್ದು, ಈಗಾಗಲೇ ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ, ರಾಸಾಯನಿಕ ಬಳಕೆಗೆ ನಿರ್ಬಂಧ ಹೇರಿದೆ. ಅದೇ ರೀತಿ ಇದೀಗ ಸಾರ್ವಜನಿಕ ಸ್ಥಳಗಳಲ್ಲಿ, ಮಾಲ್ಗಳಲ್ಲಿ ಫುಡ್ ಟೆಸ್ಟಿಂಗ್ ಕಿಟ್ ಇರಿಸಿ ಕಳಪೆ ಗುಣಮಟ್ಟದ ಆಹಾರ ಪತ್ತೆಗಾಗಿ ಫೀಲ್ಡ್ಗೆ ಇಳಿದಿದೆ. ಜನಸಾಮಾನ್ಯ ಅತ್ಯಂತ ಪ್ರಿಯವಾದ ತಿನಿಸು ಗೋಲ್ ಗಪ್ಪಾ ಇದೀಗ ಬ್ಯಾನ್ ಆಗುತ್ತಾ ಎನ್ನುವ ಪ್ರಶ್ನೆ ಹುಟ್ಟುಹಾಕಿದೆ. ಹಾಗಾಗಿ ಇದು ಗೋಲ್ ಗಪ್ಪಾ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಆಗಿದೆ.
ಗೋಲ್ ಗಪ್ಪಾದ ಗುಣಮಟ್ಟದ ಮೇಲೆ ಅನೇಕ ದೂರುಗಳು ಕೇಳಿ ಬಂದ ಕಾರಣ ಗೋಲ್ ಗಪ್ಪಾ ಪೂರಿ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಆಹಾರ ಇಲಾಖೆಯಿಂದ ಫುಡ್ ಟೆಸ್ಟಿಂಗ್ ಕಾರ್ಯಾಚರಣೆ ಮುಂದುವರಿದಿದ್ದು, ಗೋಲ್ ಗಪ್ಪಾವನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಇದನ್ನು ಓದಿ : ಮುಡಾ ಹಗರಣ; ಬೆಂಗಳೂರು, ಮೈಸೂರು ಸೇರಿ 9 ಕಡೆ ಇಡಿ ದಾಳಿ!
ಬೆಂಗಳೂರಿನಲ್ಲಿ ರ್ಯಾಂಡಮ್ ಆಗಿ ಗೋಲ್ ಗಪ್ಪಾ ಮಾದರಿ ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ 200 ಕ್ಕೂ ಹೆಚ್ಚು ಕಡೆ ಗೋಲ್ ಗಪ್ಪಾ ಮಾದರಿ ಸಂಗ್ರಹಿಸಲಾಗಿದ್ದು, ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಗೋಲ್ ಗಪ್ಪಾಗೆ ಬಳಸುವ ಪೂರಿ ಹೇಗೆ ತಯಾರು ಮಾಡುತ್ತಾರೆ? ಅದಕ್ಕೆ ಏನೆಲ್ಲಾ ಪದಾರ್ಥ ಹಾಕಲಾಗುತ್ತದೆ? ಇದರಿಂದ ಆರೋಗ್ಯದ ಮೇಲೆ ಏನೆಲ್ಲಾ ಪರಿಣಾಮ ಬೀರಲಿದೆ ಎಂಬುದನ್ನು ತಿಳಿಯಲು ಇದೀಗ ಆಹಾರ ಇಲಾಖೆ ಮುಂದಾಗಿದೆ.
ಕಳೆದ ಎರಡು ದಿನಗಳಿಂದ ಗೋಲ ಗಪ್ಪಾ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿದೆ. ಸಂಗ್ರಹಿಸಿದ ಮಾದರಿಗಳನ್ನು ಇದೀಗ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ಕೆಲವೇ ದಿನಗಳಲ್ಲಿ ವರದಿ ಬರಲಿದ್ದು, ಆಗ ಗೋಲ್ ಗಪ್ಪಾ ಬ್ಯಾನ್ ಆಗತ್ತಾ ಎನ್ನು ಪ್ರಶ್ನೆಗೆ ಉತ್ತರ ಸಿಗಲಿದೆ.