ಸ್ಪೇನ್ನ ಯುವ ಟೆನ್ನಿಸ್ ಸ್ಟಾರ್ ಕಾರ್ಲೋಸ್ ಅಲ್ಕರಾಝ್ ಸತತ ಎರಡನೇ ವರ್ಷ ವಿಂಬಲ್ಡನ್ ಪ್ರಶಸ್ತಿ ಗೆದ್ದಿದ್ದಾರೆ. 21 ವರ್ಷದ ಅಲ್ಕರಾಝ್ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ 6-2, 6-2, 7-6, (7-4) ನೇರ ಸೆಟ್ಗಳಿಂದ 7 ಬಾರಿಯ ಚಾಂಪಿಯನ್ ಸರ್ಬಿಯಾದ ಅನುಭವಿ ನೊವಾಕ್ ಜೊಕೊವಿಚ್ ಅವರನ್ನು ಸೋಲಿಸುವ ಮೂಲಕ ನಾಲ್ಕನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಲಂಡನ್ನ ಸೆಂಟರ್ ಕೋರ್ಟ್ ಅಂಗಳದಲ್ಲಿ ನಡೆದ ವಿಂಬಲ್ಡನ್ ಪುರುಷರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಸರ್ಬಿಯಾದ ಟೆನಿಸ್ ದೈತ್ಯ ಜೊಕೊವಿಚ್ರನ್ನು ಮಣಿಸಿದ ಸ್ಪೇನ್ ದೇಶದ ಯುವ ಟೆನ್ನಿಸ್ ಸ್ಟಾರ್ ಕಾರ್ಲೋಸ್ ಅಲ್ಕರಾಝ್ ಸತತ ಎರಡನೇ ಬಾರಿಗೆ ವಿಂಬಲ್ಡನ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಕಳೆದ ಬಾರಿಯೂ ಇದೇ ಜೋಡಿ ವಿಂಬಲ್ಡನ್ ಫೈನಲ್ಗೆ ಲಗ್ಗೆ ಇಟ್ಟಿದ್ದವು. ಆ ಪಂದ್ಯದಲ್ಲಿ ಸರ್ಬಿಯಾದ ಸೂಪರ್ ಸ್ಟಾರ್ ಜೊಕೊವಿಚ್ ಅವರನ್ನು ಇದೇ ಅಲ್ಕರಾಝ್ 1-6, 7-6, 6-1, 3-6, 6-4 ಸೆಟ್ಗಳಿಂದ ಮಣಿಸಿ ಚೊಚ್ಚಲ ವಿಂಬಲ್ಡನ್ ಗೆದ್ದು ಬೀಗಿದ್ದರು. ಇದೀಗ ಈ ಬಾರಿಯೂ ಅಲ್ಕರಾಝ್, 7 ಬಾರಿಯ ಚಾಂಪಿಯನ್ ನೊವಾಕ್ ಜೊಕೊವಿಚ್ ಅವರನ್ನು 6-2, 6-2, 7-6 (7-4) ನೇರ ಸೆಟ್ಗಳಿಂದ ಸೋಲಿಸುವ ಮೂಲಕ ನಾಲ್ಕನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಇತ್ತ 8 ನೇ ಬಾರಿಗೆ ವಿಂಬಲ್ಡನ್ ಗೆಲ್ಲುವ ಗುರಿಯೊಂದಿಗೆ ಅಂಗಳಕ್ಕಿಳಿದಿದ್ದ ನೊವಾಕ್ ಜೊಕೊವಿಚ್, ಕಳೆದ ಬಾರಿಯಂತೆ ಈ ಬಾರಿಯೂ ಸೋಲಿನ ನಿರಾಸೆ ಅನುಭವಿಸಬೇಕಾಯಿತು.