ತಬಲಾ ಮಾಂತ್ರಿಕ 73 ವರ್ಷದ ಜಾಕೀರ್ ಹುಸೇನ್ ಅವರು ತೀವ್ರ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದು, ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಖ್ಯಾತ ತಬಲ ವಾದಕ ಜಾಕೀರ್ ಹುಸೇನ್ ಅವರಿಗೆ ಬಿಪಿ ಸಮಸ್ಯೆ ಇತ್ತು. ಕಳೆದ ವಾರದಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.