ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಮಾಲ್ ಒಳಗೆ ಬಿಡದ ಘಟನೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ನಲ್ಲಿ ನಡೆದಿದೆ. ಹಾವೇರಿ ಮೂಲದ ನಾಗರಾಜ್ ತಮ್ಮ ತಂದೆ ತಾಯಿಯನ್ನು ಜಿಟಿ ಮಾಲ್ ಗೆ ನೆನ್ನೆ ಸಂಜೆ ಸಿನೆಮಾ ತೋರಿಸಲು ಕರೆದುಕೊಂಡು ಹೋಗಿದ್ರು. ಮಾಲ್ ಪ್ರವೇಶ ದ್ವಾರದಲ್ಲಿ ಸಿಬ್ಬಂದಿ ಪಂಚೆ ಹಾಕಿದ್ದಾರೆ ಅನ್ನೋ ಕಾರಣಕ್ಕೆ ಅವರನ್ನು ಮಾಲ್ ಒಳಗೆ ಪ್ರವೇಶ ಮಾಡಲು ಬಿಟ್ಟಿಲ್ಲ. ಅರ್ಧ ಗಂಟೆಗೂ ಹೆಚ್ಚು ಕಾಲ ಮಾಲ್ ಮುಂದೆ ಕೂರಿಸಿದ್ದಾರೆ. ನಾಗರಾಜ್ ಎಂಬುವರು ಒಳಗೆ ಬಿಡಿ ಅಂತ ಎಷ್ಟು ಬಾರಿ ಕೇಳಿದರು ಪಂಚೆ ಹಾಕೊಂಡಿದ್ದಾರೆ ಹಾಗಾಗಿ ಬಿಡುವುದಿಲ್ಲ. ಪಂಚೆ ಹಾಕಿದವರನ್ನು ಬಿಡಬಾರದು ಅಂತ ನಮ್ಮ ಮಾಲಿನಲ್ಲಿ ಈ ರೀತಿ ರೂಲ್ಸ್ ಇದೆ ಅಂತ ಹೇಳಿದ್ದಾರೆ. ನಾಗರಾಜ್ ತಂದೆ ಹಾವೇರಿ ಜಿಲ್ಲೆಯ ಅರೇಮಲ್ಲಾಪುರ ಎಂಬ ಗ್ರಾಮದ ರೈತರಾಗಿದ್ದಾರೆ. ಮಾಲ್ ಆಡಳಿತ ಮಂಡಳಿಯ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.