ಭಾರೀ ಮಳೆಗೆ ಗುಜರಾತ್ ಸಂಕಷ್ಟಕ್ಕೆ ಸಿಲುಕಿದೆ. ರಾಜ್ಯದ ಪ್ರಮುಖ ನದಿಗಳು ಮತ್ತು ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಅಪಾಯಕಾರಿ ಮಟ್ಟಕ್ಕೆ ಏರಿದೆ. ಈ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು, ರಸ್ತೆಗಳು ಮತ್ತು ರೈಲುಮಾರ್ಗಗಳ ಸಂಚಾರ ಅಸ್ತವ್ಯಸ್ತವಾಗಿದೆ. ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಜ್ಯಾದ್ಯಂತ 28 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 18,000 ಜನರನ್ನು ಅಧಿಕಾರಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ.
ಇದೀಗ ಭಾರೀ ಮಳೆಗೆ ಮನೆಯೊಂದರ ಮೇಲ್ಛಾವಣಿಯ ಮೇಲೆ ಮೊಸಳೆಯೊಂದು ಕಂಡುಬಂದಿದ್ದು, ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಈ ವಿಡಿಯೋ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.