ಗುಜರಾತ್ : ಇಲ್ಲಿ ಕಾಂಗ್ರೆಸ್ ಸಾಯುತ್ತಿದೆ ಅಲ್ಲಿ ಪಾಕಿಸ್ತಾನ ಅಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಪಾಕಿಸ್ತಾನ ಸಹಭಾಗಿತ್ವವನ್ನು ಬಹಿರಂಗಪಡಿಸಿದ್ದಾರೆ. ಭಾರತದಲ್ಲಿ 2014ಕ್ಕಿಂತ ಹಿಂದೆ ಇದ್ದಂತಹ ದುರ್ಬಲ ಸರ್ಕಾರವೇ ಇರಲೆಂದು ಪಾಕಿಸ್ತಾನ ಬಯಸುತ್ತದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಗುಜರಾತ್ ನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಭಾಷಣವನ್ನು ಪಾಕಿಸ್ತಾನದ ಮಾಜಿ ಸಚಿವ ಫವಾದ್ ಹುಸೇನ್ ಮೆಚ್ಚಿಕೊಂಡಿದ್ದನ್ನು ಪ್ರಸ್ತಾಪಿಸಿದರು. ಪಾಕಿಸ್ತಾನ ಹಾಗೂ ಕಾಂಗ್ರೆಸ್ ಮಧ್ಯೆ ಎಷ್ಟೊಂದು ಸ್ನೇಹ ಸಂಬಂಧ ಇದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಕಾಂಗ್ರೆಸ್ ಇಲ್ಲಿ ದುರ್ಬಲಗೊಳ್ಳುತ್ತಿದ್ದರೆ ಅಲ್ಲಿ ಪಾಕಿಸ್ತಾನ ರಾಹುಲ್ ಗಾಂಧಿ ಪ್ರಧಾನಿ ಆಗಬೇಕೆಂದು ಪ್ರಾರ್ಥಿಸುತ್ತಿದೆ.. ಕಾಂಗ್ರೆಸ್ ಮತ್ತು ಪಾಕಿಸ್ತಾನದ ನಡುವಿನ ಸ್ನೇಹ ಸಂಬಂಧ ಈಗಾಗಲೇ ಬಯಲಾಗಿದೆ ಎಂದರು.