ಎಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಮೊದಲಿಗೆ ಗೌರಿ ಪೂಜೆ ಮಾಡಲಾಗಿದ್ದು, ನಾಳೆ ಗಣೇಶನ ಸರದಿ. ಈ ಹಬ್ಬದ ಸಂಭ್ರಮದಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ಗೆ ಹೆಚ್ಎಮ್ಟಿ ವಾಚ್ ಗಿಫ್ಟ್ ನೀಡಿದ್ದಾರೆ. ಹೆಚ್ಎಂಟಿ ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಮುಂದಾಗಿರುವ ಕುಮಾರಸ್ವಾಮಿ, ಹೆಚ್ಎಂಟಿ ವಾಚ್ ಖರೀದಿ ಮಾಡಿ ತಮ್ಮ ಪುತ್ರ ನಿಖಿಲ್ ಕೈಗೆ ಕಟ್ಟಿದ್ದಾರೆ. ಈ ಸಂದರ್ಭದಲ್ಲಿ HMT ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಕೋಹ್ಲಿ ಇನ್ನಿತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು. ಈ ಮೂಲಕ ಬ್ರ್ಯಾಂಡ್ ಕ್ರಿಯೆಟ್ ಮಾಡಲು ಮುಂದಾಗಿದ್ದಾರೆ.
ಇನ್ನು ತಮ್ಮ ತಂದೆ ಹೆಚ್ಎಮ್ಟಿ ವಾಚ್ ಗಿಫ್ಟ್ ಮಾಡಿರುವ ವಿಚಾರವನ್ನು ನಿಖಿಲ್ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಖುಷಿಪಟ್ಟಿದ್ದಾರೆ. ಅಲ್ಲದೇ ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ HMT ಕೈಗಡಿಯಾರಗಳನ್ನೇ ಕಟ್ಟಬೇಕು ಎಂದು ಕರೆ ನೀಡಿದ್ದಾರೆ.