ಹೆಚ್ಎಂಟಿ ಕಂಪನಿ ಪುನಶ್ಚೇತಕ್ಕೆ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ಡಿ ಕುಮಾರಸ್ವಾಮಿ ಟೊಂಕ ಕಟ್ಟಿ ನಿಂತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಡಿ ಕುಮಾರಸ್ವಾಮಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಇದೀಗ, ಹೆಚ್ಡಿ ಕುಮಾರಸ್ವಾಮಿ ಅವರು ಹೆಚ್ಎಂಟಿ ವಾಚ್ನ್ನು ಉಡುಗೊರೆಯಾಗಿ ನೀಡುವಂತೆ ಕರೆ ಕೊಟ್ಟಿದ್ದಾರೆ.
ವಾಚ್ ಅಂದ್ರೆ ಹೆಚ್ಎಂಟಿ ಅಂತ ತಟ್ಟನೆ ಹೇಳುವ ಕಾಲವಿತ್ತು. ಹೆಚ್ಎಂಟಿ ವಾಚ್ ಕಟ್ಟಿಕೊಂಡರೆ ಆತ ಶ್ರೀಮಂತ ಎಂಬ ಭಾವನೆ ಮೂಡುತ್ತಿತ್ತು. ಹೆಚ್ಎಂಟಿ ವಾಚ್ ಪ್ರತಿಷ್ಠೆಯ ಸಂಕೇತವಾಗಿತ್ತು. ಆದೇ ಇದೀಗ ಹೆಚ್ಎಮ್ಟಿ ತೆರೆಮರೆಗೆ ಸರೆಯುತ್ತಿದೆ. ಹಿಂದೂಸ್ತಾನ್ ಮೆಷಿನ್ ಟೂಲ್ಸ್ ಕಂಪನಿ ಅಳಿವಿನ ಅಂಚಿನಲ್ಲಿದೆ. ಹೆಚ್ಎಂಟಿ ಕಂಪನಿ ಪುನಶ್ಚೇತಕ್ಕೆ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ಡಿ ಕುಮಾರಸ್ವಾಮಿ ಟೊಂಕ ಕಟ್ಟಿ ನಿಂತಿದ್ದಾರೆ.
ಉಡುಗೊರೆಯಾಗಿ ನೀಡಲು ಹೆಚ್ಎಂಟಿ ವಾಚ್ನ್ನೇ ಆಯ್ಕೆ ಮಾಡಿ ಎಂದು ಹೆಚ್ಡಿ ಕುಮಾರಸ್ವಾಮಿ ಅವರು ಕರ್ನಾಟಕದ ಸಂಸದರಿಗೆ ಕರೆಕೊಟ್ಟಿದ್ದಾರೆ. ಗೌರಿ ಗಣೇಶ ಹಬ್ಬದ ಪ್ರಯುಕ್ತ ಹೆಚ್ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಎಚ್ಎಂಟಿ ವಾಚ್ ಉಡುಗೊರೆಯಾಗಿ ನೀಡಿದ್ದರು.
ಈ ಕುರಿತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿ, HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು. ನಮ್ಮ ತಲೆಮಾರಿನ ಯುವಜನರಿಗೆ HMT ವಾಚ್ ಎಂದರೆ ಅದೊಂದು ದಂತಕಥೆ. ನನ್ನ ತಂದೆ, ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನದಂದು HMT ಕೈಗಡಿಯಾರ ಖರೀದಿಸಿ ನನ್ನ ಕೈಗೆ ಕಟ್ಟಿದರು” ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ HMT ಕೈಗಡಿಯಾರಗಳನ್ನೇ ಕಟ್ಟಬೇಕು ಎಂಬುದು ನನ್ನ ವಿನಂತಿ. ನಾನು HMT ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿ”. ಎಂದು ಕರೆ ಕೊಟ್ಟಿದ್ದಾರೆ.