ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬಾ ದೇವಾಲಯದ ಬಾಗಿಲನ್ನು ಈ ಬಾರಿ ಆಗಸ್ಟ್ 24ರಂದು ತೆರೆಯಲಾಗುವುದು. ಉತ್ತಮ ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಹಾಸನಾಂಬಾ ಜಾತ್ರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು. ಸಭೆ ಬಳಿಕ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್, ಆಗಸ್ಟ್ 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತ್ರಾಗೆ ಚಾಲನೆ ನೀಡಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಿರ್ಮಲಾನಂದನಾಥ ಸ್ವಾಮೀಜಿ ಈ ವೇಳೆ ಉಪಸ್ಥಿತರಿರಲಿದ್ದಾರೆ.
ಹಾಸನಾಂಬ ದೇವಿಯ ಬಾಗಿಲು 11 ದಿನ ತೆರೆದಿರಲಿದೆ. ಆದರೆ, ಮೊದಲ ಹಾಗೂ ಕೊನೆಯ ದಿವಸಗಳಂದು ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಈ ಬಾರಿ 1,000 ಹಾಗೂ 300 ರುಪಾಯಿ ಟಿಕೆಟ್ ಪಡೆದವರಿಗೆ ಒಂದೊಂದು ಲಾಡು ವಿತರಣೆ ಮಾಡಲಾಗುವುದು. ಅಲ್ಲದೆ, ಸಾರ್ವಜನಿಕರಿಗೆ ಉಚಿತವಾಗಿ ಪ್ರಸಾದ ವಿತರಿಸಲಾಗುವುದು ಎಂದರು.