ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಶಕ್ತಿ ದೇವತೆ ಹಾಸನಾಂಬೆ ದರ್ಶನ ವಿಚಾರದಲ್ಲಿ ಇಂದು ಗುರುವಾರ ಸಹ ಗಲಾಟೆ ಮುಂದುವರಿದಿದೆ. ದೇವಾಲಯದಲ್ಲಿ ಕುಟುಂಬಸ್ಥರನ್ನು ದೇಗುಲಕ್ಕೆ ಕರೆದೊಯ್ಯುವ ವಿಚಾರವಾಗಿ ಕಂದಾಯ ಇಲಾಖೆ ಸಿಬ್ಬಂದಿಯ ನಡುವೆ ಮಾರಾಮಾರಿ ನಡೆದಿದೆ.
ಇದನ್ನು ಓದಿ: ಕುಮಾರಸ್ವಾಮಿ ನೋಟು, ಯೋಗೇಶ್ವರ್ಗೆ ವೋಟು; ಸಿಪಿವೈ..!
ಹಾಸನಾಂಬೆ ದೇವಾಲಯದ ಎಕ್ಸಿಟ್ ಗೇಟ್ ಬಳಿ ಘಟನೆ ನಡೆದಿದ್ದು, ಸಿಬ್ಬಂದಿ ಕೈಕೈ ಮಿಲಾಯಿಸಿಕೊಂಡಿದ್ದಾರೆ. ಸಿಬ್ಬಂದಿಯ ಜಗಳ ಬಿಡಿಸಲು ಪೊಲೀಸರ ಹರಸಾಹಸ ಪಟ್ಟರು. ನಿನ್ನೆ ಹಾಸನಾಂಬ ದರ್ಶನ ವಿಚಾರವಾಗಿ ಹಾಸನ ನಗರಸಭೆ ಎದುರಿನ ಮುಖ್ಯದ್ವಾರದ ಬಳಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಡಿಸಿ ಕಚೇರಿ ಸಿಬ್ಬಂದಿ ಕೈ ಕೈ ಮಿಲಾಯಿಸಿದ್ದರು. ಜಗಳ ಬಿಡಿಸಲು ಸಿಬ್ಬಂದಿ ಹರಸಾಹಸಪಟ್ಟಿದ್ದರು.
ಇದನ್ನು ಓದಿ: ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ
ಹಾಸನಾಂಬ ದೇವಿಯ ದರ್ಶನಕ್ಕೆ ಇನ್ನು ಕೆಲವೇ ದಿನಗಳು ಅವಕಾಶವಿದ್ದು, ಭಕ್ತರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ದೇಗುಲಕ್ಕೆ ಬರುತ್ತಿದ್ದಾರೆ. ನಿಯಂತ್ರಣ ಮಾಡಲಾಗದೆ ಸಿಬ್ಬಂದಿ ಪರದಾಡುವಂತಾಯಿತು. ಹೀಗಾಗಿ 1000 ರೂಪಾಯಿ ಮೊತ್ತ ನೇರ ದರ್ಶನದ ಟಿಕೆಟ್ ವಿತರಣೆ, ವಿಐಪಿ ಪಾಸ್ ರದ್ದುಗೊಳಿಸಲಾಗಿದೆ. ಜತೆಗೆ, ಹಾಸನಾಂಬೆ ದರ್ಶನಕ್ಕೆ ಬಿಟ್ಟಿದ್ದ ವಿಶೇಷ ಬಸ್ಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.