- ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೂರಜ್ ರೇವಣ್ಣ ಅರೆಸ್ಟ್
- ಸೂರಜ್ ರೇವಣ್ಣ ಅವರನ್ನು ಬಂಧಿಸಿದ ಪೊಲೀಸರು
ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್ಪಿಗೂ ದೂರಿನ ಪ್ರತಿಯನ್ನು ಮೇಲ್ ಮಾಡಿದ್ದರು.
ಸೂರಜ್ ರೇವಣ್ಣ ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತರೊಬ್ಬರು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಸೂರಜ್ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.