- ಸೂರಜ್ ರೇವಣ್ಣ ವಿರುದ್ಧ ದೂರು
- ಜೆಡಿಎಸ್ ಕಾರ್ಯಕರ್ತನಿಗೆ ಸಲಿಂಗ ಲೈಂಗಿಕ ದೌರ್ಜನ್ಯ ಆರೋಪ
ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ತನಿಖೆ ಹಂತದಲ್ಲಿರುವಾಗ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ. ಸೂರಜ್ ಮೇಲೆ ಸಂತ್ರಸ್ತನಿಂದ ದೂರು ನೀಡಲಾಗಿದೆ.
ಜೆಡಿಎಸ್ ಪಕ್ಷದ ಕಾರ್ಯಕರ್ತನಿಗೆ ಸಲಿಂಗ ಲೈಂಗಿಕ ದೌರ್ಜನ್ಯ ಮಾಡಿದ ಗಂಭೀರ ಆರೋಪ ಕೇಳಿಬಂದಿದೆ. ಈ ಬಗ್ಗೆ ಜೆಡಿಎಸ್ ಕಾರ್ಯಕರ್ತ ಬೆಂಗಳೂರಿಗೆ ತೆರಳಿ ಡಿಸಿ ಹಾಗೂ ಐಜಿಪಿಗೆ ದೂರು ನೀಡಿದ್ದಾರೆ. ಜೂನ್ 16 ರ ಸಂಜೆ ನನ್ನ ಮೇಲೆ ಬಲವಂತವಾಗಿ ಅಸಹಜವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಯುವಕ ದೂರಿನಲಲಿ ಉಲ್ಲೇಖಿಸಿದ್ದಾನೆ. ಇದನ್ನು ಯಾರಿಗಾದ್ರು ಹೇಳಿದ್ರೆ ಸಾಯಿಸುವುದಾಗಿ ಬೆದರಿಕೆ ಹಾಕಿದ್ದಾಗಿ ಆರೋಪಿಸಿದ್ದಾನೆ. ಜೊತೆಗೆ 2 ಕೋಟಿ ದುಡ್ಡು ಕೊಡುವ ಆಮಿಷವೊಡ್ಡಿದ್ದಾರೆಂದು ಆರೋಪಿಸಿದ್ದಾರೆ.