ಮೀನು ತಿಂದು ಇಬ್ಬರ ಸಾವು…ಹಲವರು ಅಸ್ವಸ್ಥ..!
ಹಾಸನ ಜಿಲ್ಲೆಯ ಬಸವಹಳ್ಳಿ ಗ್ರಾಮದಲ್ಲಿ ಘಟನೆ
ಮೀನು ತಿಂದು ಇಬ್ಬರು ಸಾವನ್ನಪ್ಪಿದ್ದು, ಹಲವು ಮಂದಿ ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬಸವಹಳ್ಳಿ ಗ್ರಾಮದಲ್ಲಿ ನಡೆದಿದೆ. ನೀರಿಲ್ಲದೆ ಖಾಲಿಯಾಗಿದ್ದ ಕೆರೆಯಲ್ಲಿ ಮೀನನ್ನು ಹಿಡಿದುಕೊಂಡು ಹೋಗಿದ್ದ ಗ್ರಾಮಸ್ಥರು.. ಅಡುಗೆ ಮಾಡಿ ಊಟ ಮಾಡಿದ ನಂತರ ಇದ್ದಕ್ಕಿದಂತೆ ಹದಿನೈದಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥರನ್ನು ಅರಕಲಗೂಡು ಹಾಗೂ ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.