ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ‘ಸತ್ಸಂಗ’ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ 120 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಹಲವಾರು ಮಂದಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹತ್ರಾಸ್ ಸಿಕಂದರಾ ರಾವ್ ಪಟ್ಟಣದಲ್ಲಿ ಸತ್ಸಂಗ ಆಯೋಜಿಸಿ ವಿಶೇಷವಾಗಿ ಹಾಕಲಾಗಿದ್ದ ಪೆಂಡಾಲ್ನಲ್ಲಿ ಧಾರ್ಮಿಕ ಬೋಧಕರೊಬ್ಬರು ತಮ್ಮ ಅನುಯಾಯಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ದುರ್ಘಟನೆ ನಡೆದಿದೆ.
ಘಟನೆಯಲ್ಲಿ ಇಬ್ಬರು ಮಕ್ಕಳು, 25 ಮಂದಿ ಮಹಿಳೆಯರು ಮೃತಪಟ್ಟಿದ್ದು ಹಲವರು ಗಾಯಗೊಂಡಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.