ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಇತ್ತೀಚೆಗೆ ನವದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸಂಗ್ರಹಾಲಯಕ್ಕೆ ಭೇಟಿ ನೀಡಿದ್ದರು. ನೆನ್ನೆ ದೆಹಲಿ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಅದರ ವಿಡಿಯೋವನ್ನು ತಮ್ಮ ಎಕ್ಸ್ ನಲ್ಲಿ ಹಂಚಿಕೊಂಡಿರುವ ಅವರು, ಹಲವು ವರ್ಷಗಳಿಂದ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಬೇಕೆಂಬುದು ನನ್ನ ಆಸೆಯಾಗಿತ್ತು. ಅದು ಇಂದು ನೆರವೇರಿದೆ. ನನ್ನ ಸಂಪುಟದಲ್ಲಿ ಮತ್ತು ಪ್ರತಿಪಕ್ಷಗಳ ಪ್ರತಿರೋಧದ ನಡುವೆಯೂ ನಾನು 1996ರಲ್ಲಿ ಪ್ರಧಾನಿಯಾಗಿದ್ದಾಗ ಈ ಯೋಜನೆಗೆ ಆರ್ಥಿಕ ಮುಚ್ಚುವಿಕೆಯನ್ನು ನೀಡಿದ್ದೆ. ಇದು ಜನರಿಗೆ ಸಹಾಯವಾಗಿದೆ ಎಂದು ಹೇಳಿದ್ದಾರೆ.