ಕರ್ನಾಟಕದಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ರಾಜಕೀಯ ರಂಗದಲ್ಲಿ ಚುನಾವಣಾ ರಂಗು ಗರಿಗೆದರಿದೆ. ಎಲ್ಲಾ ಕಡೆ ಎಲೆಕ್ಷನ್ ಬಗ್ಗೆಯೇ ಮಾತು. ಆದರೆ ಟಿಕೆಟ್ ವಿಚಾರದಲ್ಲಿ ಮಾತ್ರ ಇನ್ನೂ ಗೊಂದಲ ಬಗೆಹರಿದಂಗೆ ಕಾಣಿಸುತ್ತಿಲ್ಲ.
ಹೌದು.. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಗೆ ಯಾವ ಪಕ್ಷಗಳೂ ಸಹ ಇನ್ನೂ ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡಿಲ್ಲ. ಆದರೆ ಟಿಕೆಟ್ ಪಡೆಯಲು ಸಾಕಷ್ಟು ಮಂದಿ ಲಾಬಿ ನಡೆಸುತ್ತಿದ್ದಾರೆ. ವಿಶೇಷವಾಗಿ ಮಾಜಿ ಸಿಎಂಗಳೇ ಈ ರೀತಿಯ ಲಾಬಿ ನಡೆಸುತ್ತಿರುವುದು ಅಚ್ಚರಿ ಮೂಡಿಸಿದೆ.
ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಮಾಜಿ ಸಿಎಂ, ಹಾಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಮಗನಾದ ನಿಖಿಲ್ ಗೆ ಟಿಕೆಟ್ ಬೇಕೇಂದು ಪಟ್ಟು ಹಿಡಿದಿದ್ದಾರೆ. ಆದರೆ ಬಿಜೆಪಿಯಿಂದ ಪ್ರಬಲ ಆಕಾಂಕ್ಷಿಯಾಗಿರುವ ಸಿ.ಪಿ ಯೋಗೇಶ್ವರ್ ಇದಕ್ಕೆ ಅಡ್ಡಿಯಾಗಿದ್ದಾರೆ. ಇಂದು ಟಿಕೆಟ್ ವಿಚಾರವಾಗಿ ಬಿಜೆಪಿ ಜೊತೆ ಕೊನೆ ಸುತ್ತಿನ ಮಾತುಕತೆ ನಡೆಸಲಿದ್ದಾರೆ ಕುಮಾರಸ್ವಾಮಿ.
ಅತ್ತ ಶಿಗ್ಗಾಂವಿ ಕ್ಷೇತ್ರ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿದ್ದು, ಬಿಜೆಪಿ ಹಿಡಿತ ಸಾಧಿಸಿರುವ ಭದ್ರ ಕೋಟೆ. ಹಾಗಾಗಿ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ಕೊಡಿಸಲು ಸಂಸದ ಬಸವರಾಜ್ ಬೊಮ್ಮಾಯಿ ಭಾರಿ ಲಾಬಿ ನಡೆಸುತ್ತಿದ್ದಾರೆ.
ಇದನ್ನೂ ಓದಿ : ರಂಜಿತ್ಗೆ ಬಿಗ್ಬಾಸ್ ಸ್ಪರ್ಧಿಗಳು ಕಣ್ಣೀರಿನ ವಿದಾಯ!
ಮೊನ್ನೆ ಮಾಜಿ ಸಿಎಂ ಯಡಿಯೂರಪ್ಪರನ್ನ ಭೇಟಿ ಮಾಡಿದ್ದ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆಸಿ ಪುತ್ರನಿಗೆ ಟಿಕೆಟ್ ಕೊಡಿಸಲು ಬೊಮ್ಮಾಯಿ ಹರಸಾಹಸ ಪಡುತ್ತಿದ್ದಾರೆ. ಎಲ್ಲಾ ಅಧಿಕಾರವನ್ನ ತಾವು ತಮ್ಮ ಮಕ್ಕಳೇ ಅನುಭವಿಸಬೇಕು ಎಂಬ ರಾಜಕೀಯ ನಾಯಕರ ಈ ನಡೆಗೆ ಸಾರ್ವಜನಿಕರೇ ಬುದ್ಧಿ ಕಲಿಸಬೇಕು.