- ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಉಕ್ಕು , ಭಾರೀ ಕೈಗಾರಿಕೆ ಸಚಿವ ಹೆಚ್ಡಿಕೆ
- ಹೊಸ ರೈಲ್ವೆ ಮಾರ್ಗಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದ ಹೆಚ್ಡಿಕೆ
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವು ಸಮಾಲೋಚನೆ ಮಾಡಿದರು.
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು. ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದರು.
ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿತ್ತು ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದರು. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ- ಚಾಮರಾಜನಗರ ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಶೀಘ್ರವಾಗಿ ಪೂರ್ಣಗೊಳಿಸಲು ರೈಲ್ವೆ ಸಚಿವರನ್ನು ಕುಮಾರಸ್ವಾಮಿ ಕೋರಿದರು.