ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿರುವ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿಂದ ಜಾಮೀನು ಮಂಜೂರು ಮಾಡಿದೆ. ರೇವಣ್ಣ 5 ಲಕ್ಷ ಬಾಂಡ್ ನೀಡಬೇಕು. ಸಾಕ್ಷ್ಯಗಳನ್ನು ನಾಶಮಾಡಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕೆಂದು ರೇವಣ್ಣಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ನಾಳೆ ಹೆಚ್ಡಿ ರೇವಣ್ಣಗೆ ಬಿಡುಗಡೆ ಸಾಧ್ಯತೆ ಇದೆ.