ಸರ್ಕಾರಿ ಹುದ್ದೆಗಳಿಗಾಗಿ ಕಾಯುತ್ತಿರುವ ಆಕಾಂಕ್ಷಿಗಳಿಗೆ ಆರೋಗ್ಯ ಇಲಾಖೆ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇನ್ಸ್ಪೆಕ್ಷನ್ ಆಫೀಸರ್, ಪಿಹೆಚ್ಸಿಗಳಲ್ಲಿ ಸಿಬ್ಬಂದಿ ಸೇರಿದಂತೆ ಇನ್ನೂ ಹಲವು ಹುದ್ದೆಗಳು ಖಾಲಿ ಇವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಗಮನಹರಿಸುತ್ತೇವೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುತ್ತಿದ್ದೇವೆ. ವಿಧಾನಸೌಧದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಿಎಂ ಗಮನಕ್ಕೆ ತಂದು 2 ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡ್ತೇವೆ ಎಂದರು.