ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಂಗಳವಾರ 487 ಮಂದಿಗೆ ಡೆಂಘೀ ದೃಢ ಪಡುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 10 ಸಾವಿರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 487 ಮಂದಿಗೆ ಡೆಂಘೀ ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 10,449 ಕ್ಕೆ ಏರಿಕೆಯಾಗಿದ್ದು, ಒಟ್ಟು ಎಂಟು ಮಂದಿ ಸಾವನ್ನಪ್ಪಿದಂತಾಗಿದೆ. ಮಂಗಳವಾರದ ಪ್ರಕರಣಗಳ ಪೈಕಿ 128 ಮಂದಿ ಆಸ್ಪತ್ರೆ ದಾಖಲಾಗಿದ್ದು, ಒಟ್ಟಾರೆ 358 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.