ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು, ಕೆರೆ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅಲ್ಲದೆ ಹಲವೆಡೆ ರಸ್ತೆಗಳು ಚರಂಡಿಯಂತೆ ಮಾರ್ಪಟ್ಟಿವೆ. ಹಾಗೆಯೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿತದ ಹಿನ್ನೆಲೆ ಹಲವೆಡೆ ರಸ್ತೆಗಳು ಬಂದ್ ಆಗಿರುವ ಘಟನೆಗಳು ನಡೆದಿವೆ.
ಭಾರೀ ಮಳೆ ಸುರಿದಿರುವ ಹಿನ್ನೆಲೆ ರಸ್ತೆ ಮೇಲೆ ಗುಡ್ಡ ಕುಸಿದ ಪರಿಣಾಮ ಹೊನ್ನಾವರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-206 ಬಂದ್ ಮಾಡಲಾಗಿದೆ. ವರ್ನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿಢೀರ್ ಗುಡ್ಡ ಕುಸಿದಿದ್ದು, ಇದರಿಂದ ರಾಷ್ಟ್ರೀಯ ಹೆದ್ದಾರಿ ಮೇಲೆ ದೊಡ್ಡ ಮರ ಹಾಗೂ ಮಣ್ಣು ಬಿದ್ದು ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ. ಇನ್ನು ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಈ ಮಾರ್ಗವನ್ನು ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದ