ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ರಾಮನಾಥಪುರಂ, ತೆಂಕಸಿ, ತೂತುಕುಡಿ, ತಿರುನಲ್ವೇಲಿ ಮತ್ತು ಕಾರೈಕಾಲ್ನಲ್ಲಿ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಜಿಲ್ಲೆಗಳ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೂ ರಜೆ ಘೋಷಿಸಲಾಗಿದೆ.
ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 22 ರಿಂದ ಭಾರೀ ಮಲೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ನವೆಂಬರ್ 22ರಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
ಅಕ್ಟೋಬರ್ 1 ರಿಂದ ನವೆಂಬರ್ 15 ರವರೆಗೆ ಈಶಾನ್ಯ ಮಾನ್ಸೂನ್ ಸಮಯದಲ್ಲಿ ತಮಿಳುನಾಡು 276 ಮಿಮೀ ಮಳೆಯನ್ನು ಪಡೆದಿದೆ. ಕೊಯಂಬತ್ತೂರಿನಲ್ಲಿ ಅತಿ ಹೆಚ್ಚು 418 ಮಿಲಿ ಮಳೆಯಾಗಿದೆ. ಚೆನ್ನೈ ಸೇರಿದಂತೆ 17 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದೆ.