ಲೋಕಸಭೆ ಚುನಾವಣೆಯ ಫಲಿತಾಂಶವು ಈಗಾಗಲೇ ಕೆಲವು ಕ್ಷೇತ್ರದಲ್ಲಿ ಪ್ರಕಟವಾಗಿದೆ. ನಟಿ ಮತ್ತು ಬಿಜೆಪಿ ನಾಯಕಿ ಕಂಗನಾ ರಣಾವತ್ ಅವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದಾರೆ. ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರು ಪ್ರತಿಸ್ಪರ್ಧಿ ಕಾಂಗ್ರೆಸ್ ಸ್ಪರ್ಧಿ ವಿಕ್ರಮಾದಿತ್ಯ ಸಿಂಗ್ ವಿರುದ್ಧ 72,088 ಮತಗಳಿಂದ ಗೆಲುವು ಸಾಧಿಸಿದ್ದಾರೆ.
“ಹೆಣ್ಣಿನ ಬಗ್ಗೆ ಕೀಳಾಗಿ ಮಾತನಾಡುವ ಪರಿಣಾಮಗಳನ್ನು ಅವರು ಅನುಭವಿಸಬೇಕಾಗುತ್ತದೆ. ನನ್ನ ‘ಜನ್ಮಭೂಮಿ’ ಹಿಮಾಚಲ ಪ್ರದೇಶದಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಗುರಿಯಲ್ಲಿ ನಾನು ಸೈನಿಕನಾಗಿ ಕೆಲಸ ಮಾಡುತ್ತೇನೆ. ಬಹುಶಃ, ಬೇರೊಬ್ಬರು ತಮ್ಮ ಬ್ಯಾಗ್ ಪ್ಯಾಕ್ ಮಾಡಿ ಹೊರಡಬೇಕಾಗುತ್ತದೆ. ಆದರೆ ನಾನು ಇಲ್ಲಿ ಇದ್ದೇ ಇರುತ್ತೇನೆʼʼಎಂದು ಗೆಲ್ಲುವ ಮುಂಚೆ ಕಂಗನಾ ಹೇಳಿಕೆ ನೀಡಿದ್ದರು.